ಉತ್ತರಾಖಂಡದಲ್ಲಿ ಭೂಕುಸಿತ: ಇಬ್ಬರು ಸಾವು

Prasthutha|

ಉತ್ತರಾಖಂಡ: ಪಿಥೋರಗಡ ಜಿಲ್ಲೆಯ ಜುಮ್ಮಾಹಳ್ಳಿ ಬಳಿ ಸಂಭವಿಸಿದ ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದು, ಐದು ಮಂದಿ ನಾಪತ್ತೆಯಾಗಿದ್ದಾರೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

- Advertisement -

ವಿಪತ್ತು ನಿರ್ವಹಣಾ ತಂಡದ ಸದಸ್ಯರು ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ. ಮನೆಗಳು ಕುಸಿದ ಸ್ಥಳದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಪಿಥೋರಘರ್ ಡಿಎಂ ಆಶೀಶ್ ಚೌಹಾಣ್​, ಈಗಾಗಲೇ ಎಸ್‌ ಡಿ ಆರ್‌ ಎಫ್ ಮತ್ತು ಎಸ್‌ ಎಸ್‌ ಬಿ ತಂಡಗಳನ್ನು ಜುಮ್ಮಾ ಗ್ರಾಮಕ್ಕೆ ಕಳುಹಿಸಲಾಗಿದೆ. ಐವರು ಅವಶೇಷದಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ದೊರೆತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಗತ್ಯ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದಿದ್ದಾರೆ.

Join Whatsapp