Home ಟಾಪ್ ಸುದ್ದಿಗಳು ವಯನಾಡ್’ನಲ್ಲಿ ಭೂಕುಸಿತ | ಕೇರಳಕ್ಕೆ ಅಗತ್ಯ ನೆರವು ನೀಡಲು ಸಿದ್ದ: ಸಿದ್ದರಾಮಯ್ಯ ಭರವಸೆ

ವಯನಾಡ್’ನಲ್ಲಿ ಭೂಕುಸಿತ | ಕೇರಳಕ್ಕೆ ಅಗತ್ಯ ನೆರವು ನೀಡಲು ಸಿದ್ದ: ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ” ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ತಿಳಿಸಿದ್ದಾರೆ.
ಕೇರಳದ ವಯನಾಡ್ನಲ್ಲಿ ಭೂಕುಸಿತ ಉಂಟಾಗಿದೆ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಹಲವರು ಭೂಕುಸಿತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಗಾಗಲೇ ರಕ್ಷಣಾ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

Join Whatsapp
Exit mobile version