ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸುಳ್ಯದ ಜಾಲ್ಸೂರ್ ಕಮರ್ಷಿಯಲ್ ಕಾಂಪ್ಲೆಕ್ಸ್ ಬಳಿ ಗುಡ್ಡ ಕುಸಿದು ಬಿದ್ದದೆ.
ಸುಳ್ಯದ ಜಾಲ್ಸೂರ್ ಬಳಿ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟದ ಹಿಂದಿನ ಗುಡ್ಡ ಕುಸಿದು ಬಿದ್ದಿದ್ದು, ಕಾಂಪ್ಲೆಕ್ಸ್ ನ ಒಳಗಡೆ ಇದ್ದ ಜನ ಆತಂಕದಿಂದ ಹೊರಗಡೆ ಬಂದಿದ್ದಾರೆ.
ಇನ್ನೊಂದೆಡೆ ಸುಳ್ಯದ ಪೈಚಾರ್ ಬಳಿ ರಸ್ತೆಯ ಮೇಲೆಯೇ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಅಲ್ಲದೆ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರಿದಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಮತ್ತು ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.