ಪಡೀಲ್ ಬಳಿ ಭೂ ಕುಸಿತ: ರೈಲು ಸಂಚಾರ ರದ್ದು

Prasthutha|

ಮಂಗಳೂರು: ನಿನ್ನೆ ರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಂಗಳೂರು- ಪಡೀಲ್ ಜಂಕ್ಷನ್ ವಿಭಾಗದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ರೈಲು ಸಂಖ್ಯೆ 06488 ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ಅನ್ ರಿಸರ್ವ್ಡ್ ಎಕ್ಸ್ಪ್ರೆಸ್ ವಿಶೇಷದ ಸೇವೆಯನ್ನು ದಿನಾಂಕ 30.06.2022 ರಂದು (ಇಂದು) ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 06489 ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರಸ್ತೆ ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆಯನ್ನು ದಿನಾಂಕ 30.06.2022 ರಂದು (ಇಂದು) ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮಣ್ಣು ತೆರವು ಕಾರ್ಯ ನಡೆಸಲಾಗುತ್ತಿದ್ದು, ಸಂಜೆಯ ವೇಳೆಗೆ ಹಳಿಯು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ತಿಳಿದು ಬಂದಿದೆ.



Join Whatsapp