ಶಿರಾಡಿಘಾಟ್’ನಲ್ಲಿ ಮತ್ತೆ ಗುಡ್ಡ ಕುಸಿತ: ಸಂಚಾರ ಸ್ಥಗಿತ

Prasthutha|

ಹಾಸನ: ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.

- Advertisement -


ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.


ಇದೇ ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನಂತರ ಮಾರನೇ ದಿನ ಜು.19 ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು.



Join Whatsapp