ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆ ಮುಂದುವರೆದಿದೆ. ಹೀಗಾಗಿ ನಿರಂತರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಭೀತಿ ಎದುರಾಗಿದೆ.
ಈ ನಿಟ್ಟಿನಲ್ಲಿ ಮಣ್ಣು ಕುಸಿಯುತ್ತಿರುವ ಕಡೆ ಸೂಚನಾ ಫಲಕ ಅಳವಡಿಸುವ ಮೂಲಕ ತಾಲೂಕು ಆಡಳಿತ, ಹೆದ್ದಾರಿ ಪ್ರಾಧಿಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಭೂಕುಸಿತ ಭೀತಿ ಹಿನ್ನಲೆ ಪ್ರತಿನಿತ್ಯ ಆತಂಕದಲ್ಲೇ ವಾಹನ ಸವಾರರು ಸಂಚಾರ ಮಾಡುವಂತಾಗಿದೆ. ಜುಲೈ ತಿಂಗಳಲ್ಲಿ ಧಾರಾಕಾರ ಮಳೆಯಿಂದ ದೊಡ್ಡತಪ್ಲು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿತ್ತು. ಈಗ ಮತ್ತೆ ಮಳೆಯಾಗುತ್ತಿರುವುದರಿಂದ ಭೂಕುಸಿತದ ಭೀತಿ ಎದುರಾಗಿದೆ.