ABVP ಪ್ರತಿಭಟನೆ ವೇಳೆ ಲಾಠಿಚಾರ್ಜ್

Prasthutha|

 ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದ ವೇಳೆ, ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಹಸ್ತಕ್ಷೇಪ ಮಾಡಿದಾಗ ಅವರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

- Advertisement -

ಬೆಂಗಳೂರು ವಿಶ್ವವಿದ್ಯಾಲಯ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆ’ ನೇತೃತ್ವದಲ್ಲಿ ವಿದ್ಯಾರ್ಥಿಗಳ ಇನ್ನೊಂದು ಗುಂಪು, ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರೊಬ್ಬರು ಅವಮಾನ ಮಾಡಿದ್ದಾರೆ ಎಂದು ಎಂದು ಆರೋಪಿಸಿ ಪ್ರತಿಭಟನೆ ಆರಂಭಿಸಿದ್ದರು. ‘ವಿಶ್ವವಿದ್ಯಾಲಯ ಆವರಣದಲ್ಲಿ ಯಾರು ಪ್ರತಿಭಟನೆ ನಡೆಸಬೇಕು?’ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಪರಿಸ್ಥಿತಿ ಕೈಮೀರಿ ಹೋಗುವುದನ್ನು ತಪ್ಪಿಸಲು ಮಧ್ಯಪ್ರವೇಶಿಸಿದ ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಪಡಿಸಲು ಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ತಳ್ಳಾಟವಾಯಿತು.

- Advertisement -

ಬಳಿಕ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದ ಪೊಲೀಸರು ಅಲ್ಲಿಂದ ಚದುರಿಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಸಂಘಟನೆಯ 20ಕ್ಕೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.  

Join Whatsapp