ಶಿಕ್ಷಕರ ಅರ್ಹತಾ ಪರೀಕ್ಷಾ ಆಕಾಂಕ್ಷಿಗಳ ಮೇಲೆ ಲಾಠಿಚಾರ್ಜ್

Prasthutha|

ಪಾಟ್ನಾ: ಶಿಕ್ಷಕರ ಅರ್ಹತಾ ಪರೀಕ್ಷಾ ಆಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಅವರ ಮೇಲೆ ಲಾಠಿಪ್ರಹಾರ ನಡೆಸಿದ ಪರಿಣಾಮ ಹಲವು ಅಭ್ಯರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಪಾಟ್ನಾದಲ್ಲಿ ನಡೆದಿದೆ.

- Advertisement -


ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ –ಟಿಇಟಿ ಹಾಗೂ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ-ಸಿಟಿಇಟಿ ಆಕಾಂಕ್ಷಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಟ್ನಾದಲ್ಲಿ ಜಮಾಯಿಸಿ ತಮ್ಮನ್ನು ಶೀಘ್ರವೇ ಶಿಕ್ಷಕರಾಗಿ ನೇಮಿಸಿಕೊಳ್ಳುವಂತೆ ಆಗ್ರಹಿಸಿದರು.


ಏಳನೇ ಹಂತದ ನೇಮಕಾತಿಗೆ ಸರ್ಕಾರ ಅಧಿಸೂಚನೆಯನ್ನು ಹೊರಡಿಸದ ಕಾರಣ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದರು. ವಿಧಾನಸಭೆಯ ಅಧಿವೇಶನದ ಮೊದಲ ದಿನವಾದ ಇಂದು ಈ ಸಾವಿರಾರು ವಿದ್ಯಾರ್ಥಿಗಳು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಏಳನೇ ಹಂತದ ನೇಮಕಾತಿಯ ಅಡಿಯಲ್ಲಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು.

Join Whatsapp