Home ಟಾಪ್ ಸುದ್ದಿಗಳು ವಿದ್ಯಾರ್ಥಿಗಳ ಮೇಲೆ ಲಾಠಿಪ್ರಹಾರ: ವಿಧಾನ ಪರಿಷತ್ ನಲ್ಲಿ ಪ್ರತಿಧ್ವನಿ, ಸಮಗ್ರ ತನಿಖೆಗೆ ಆಗ್ರಹ

ವಿದ್ಯಾರ್ಥಿಗಳ ಮೇಲೆ ಲಾಠಿಪ್ರಹಾರ: ವಿಧಾನ ಪರಿಷತ್ ನಲ್ಲಿ ಪ್ರತಿಧ್ವನಿ, ಸಮಗ್ರ ತನಿಖೆಗೆ ಆಗ್ರಹ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿದ ಘಟನೆ ವಿಧಾನ ಪರಿಷತ್ ನಲ್ಲಿಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಎಂ.ನಾರಾಯಣಸ್ವಾಮಿ, ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿ ನಿನ್ನೆ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ. ಈ ವೇಳೆ ಪೊಲೀಸರು ಅವರ ಮೇಲೆ ಲಾಠಿಚಾರ್ಜ್ ನಡೆಸಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದು ಖಂಡನೀಯ. ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.


ಈ ವೇಳೆ ಕಾಂಗ್ರೆಸ್ ನ ಸದಸ್ಯರು ಕೂಡ ಅದಕ್ಕೆ ಧ್ವನಿಗೂಡಿಸಿದರು. ಆದರೆ ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಶೂನ್ಯವೇಳೆಯಲ್ಲಿ ಇದರ ಬಗ್ಗೆ ಚರ್ಚೆ ನಡೆಸಬಾರದು ಎಂದು ಒತ್ತಾಯಿಸಿದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.


ಮಧ್ಯಪ್ರವೇಶಿಸಿದ ಸಭಾಪತಿ, ವಿಷಯದ ಬಗ್ಗೆ ಸಂಬಂಧಪಟ್ಟ ಸಚಿವರಿಂದ ಉತ್ತರ ದೊರಕಿಸಿಕೊಡುವುದಾಗಿ ಹೇಳಿ ವಿವಾದಕ್ಕೆ ತೆರೆ ಎಳೆದರು.

Join Whatsapp
Exit mobile version