ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್​ ಗಾಂಧಿ ಟೀಕಾ ಪ್ರಹಾರ

Prasthutha|

- Advertisement -

ಮೈಸೂರು:ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ನಗರದಲ್ಲಿ ಬುಧವಾರ ಅದ್ಧೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆನ್​ಲೈನ್​ ಬಟನ್​ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಯೋಜನೆಗೆ ಚಾಲನೆ ನೀಡಿ ಮಾತನಾಡಿದ ರಾಹುಲ್ ಗಾಂಧಿ, ನಾವು ನುಡಿದಂತೆ ನಡೆದಿದ್ದೇವೆ. ಯುವನಿಧಿ ಯೋಜನೆಯನ್ನು ಹೊರತುಪಡಿಸಿ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಕೊಟ್ಟ ಮಾತು ನಡೆಸಿಕೊಟ್ಟಿದ್ದೇವೆ. ಮಹಿಳಾ ಸಬಲೀಕರಣ ಯೋಜನೆ ಜಾರಿ ಮಾಡುವ ಮೂಲಕ ನಾವು ನಮ್ಮ ಭರವಸೆ ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.

- Advertisement -

ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿಗಳನ್ನು ಹಿಯಾಳಿಸಿದರು. ಆದರೆ ನಾವು ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಮುನ್ನುಗ್ಗಿದೆವು. ಕೊಟ್ಟ ಮಾತನ್ನು ಈಡೇರಿಸಿದ್ದೇವೆ. ಆದರೆ ದಿಲ್ಲಿಯಲ್ಲಿರುವ ಸರ್ಕಾರ ಕೋಟ್ಯಧಿಪತಿಗಳಿಗೆ ಅಷ್ಟೇ ಲಾಭಕರ ಯೋಜನೆಗಳನ್ನು ಘೋಷಣೆ ಮಾಡುತ್ತದೆ. ಒಂದಿಬ್ಬರು ಉದ್ಯಮಿಪತಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



Join Whatsapp
Exit mobile version