Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಶೋಭಾ ಕರಂದ್ಲಾಜೆ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಶೋಭಾ ಕರಂದ್ಲಾಜೆ

ನವದೆಹಲಿ: ಕಡಬ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಯುವಕ ನಡೆಸಿದ ಆಸಿಡ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಕಾನೂನು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದಾರೆ.

“ಕಡಬ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯರ ಮೇಲೆ ಕೇರಳದ ಆರೋಪಿಯೊಬ್ಬ ನಡೆಸಿದ ಆಸಿಡ್ ದಾಳಿಯು ಭೀಕರವಾದ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ. ಹೆಚ್ಚುತ್ತಿರುವ ಅಪರಾಧಗಳ ಪ್ರಮಾಣವನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣಕ್ಕಾಗಿ ಗೃಹ ಸಚಿವ ಜಿ ಪರಮೇಶ್ವರ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ,ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಪ್ರತಿದಿನವೂ ಹೊಸ ಅಪರಾಧಗಳು ನಡೆಯುತ್ತಿರುವುದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ. ಗೃಹ ಸಚಿವ ಪರಮೇಶ್ವರ ಅವರ ನಿಷ್ಪರಿಣಾಮಕಾರಿ ನಾಯಕತ್ವ ಎದ್ದುಕಾಣುತ್ತಿದೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ. ಕರ್ನಾಟಕದ ನಾಗರಿಕರ ಸುರಕ್ಷತೆಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version