ಜನಸಂಖ್ಯಾ ನಿಯಂತ್ರಣಕ್ಕೆ ಶೀಘ್ರವೇ ಕಾನೂನು ಜಾರಿ: ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್

Prasthutha|

ರಾಯ್ ಪುರ: ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನನ್ನು ಶೀಘ್ರದಲ್ಲೇ ತರಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ.

- Advertisement -

ಬರೋಂಡಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬಯೋಟಿಕ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ನ ‘ಗರೀಬ್ ಕಲ್ಯಾಣ್ ಸಮ್ಮೇಳನ’ದಲ್ಲಿ, ಜನಸಂಖ್ಯಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಟೇಲ್, “ಶೀಘ್ರದಲ್ಲೇ ಅದನ್ನು ತರಲಾಗುವುದು, ಚಿಂತಿಸಬೇಡಿ. ಅಂತಹ ಬಲವಾದ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಂಡ ನಂತರ ಉಳಿದವುಗಳನ್ನು ಸಹ ತೆಗೆದುಕೊಳ್ಳಲಾಗುವುದು ಹೇಳಿದ್ದಾರೆ.

Join Whatsapp