Home ಟಾಪ್ ಸುದ್ದಿಗಳು ಜನಸಂಖ್ಯಾ ನಿಯಂತ್ರಣಕ್ಕೆ ಶೀಘ್ರವೇ ಕಾನೂನು ಜಾರಿ: ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್

ಜನಸಂಖ್ಯಾ ನಿಯಂತ್ರಣಕ್ಕೆ ಶೀಘ್ರವೇ ಕಾನೂನು ಜಾರಿ: ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್

ರಾಯ್ ಪುರ: ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನನ್ನು ಶೀಘ್ರದಲ್ಲೇ ತರಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ.

ಬರೋಂಡಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬಯೋಟಿಕ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ನ ‘ಗರೀಬ್ ಕಲ್ಯಾಣ್ ಸಮ್ಮೇಳನ’ದಲ್ಲಿ, ಜನಸಂಖ್ಯಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಟೇಲ್, “ಶೀಘ್ರದಲ್ಲೇ ಅದನ್ನು ತರಲಾಗುವುದು, ಚಿಂತಿಸಬೇಡಿ. ಅಂತಹ ಬಲವಾದ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಂಡ ನಂತರ ಉಳಿದವುಗಳನ್ನು ಸಹ ತೆಗೆದುಕೊಳ್ಳಲಾಗುವುದು ಹೇಳಿದ್ದಾರೆ.

Join Whatsapp
Exit mobile version