Home ಟಾಪ್ ಸುದ್ದಿಗಳು ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

0

ಕೋಲ್ಕತ್ತ: ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಜುಲೈ 8ರವರೆಗೆ ವಿಸ್ತರಿಸಿದೆ.

ಪ್ರಮುಖ ಆರೋಪಿ, ಕಾಲೇಜಿನ ಹಳೆಯ ವಿದ್ಯಾರ್ಥಿ ಮೊನೊಜಿತ್ ಮಿಶ್ರಾ, ಪ್ರಸ್ತುತ ಕಾಲೇಜಿನ ವಿದ್ಯಾರ್ಥಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖರ್ಜಿ ಅವರನ್ನು ಕಳೆದ ಗುರುವಾರ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರಂಭದಲ್ಲಿ ಆರೋಪಿಗಳನ್ನು 4 ದಿನ ಪೊಲೀಸ್‌ ಕಸ್ಟಡಿಗೆ ವಹಿಸಲಾಗಿತ್ತು.

ಕಸ್ಟಡಿ ಅವಧಿ ಮುಗಿದ ನಂತರ ನಿನ್ನೆ (ಸೋಮವಾರ) ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯಿತು. ಜುಲೈ 8ರವರೆಗೆ ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಭದ್ರತಾ ಸಿಬ್ಬಂದಿ ಪಿನಾಕಿ ಬ್ಯಾನರ್ಜಿ ಅವರನ್ನು ಶನಿವಾರ ಬಂಧಿಸಲಾಗಿದ್ದು, ಮಂಗಳವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಆದರೆ ಬ್ಯಾನರ್ಜಿಯ ಪೊಲೀಸ್‌ ಕಸ್ಟಡಿ ಅವಧಿಯನ್ನು ಜುಲೈ 4 ರವರೆಗೆ ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಜೂನ್ 25 ರಂದು ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿತ್ತು

NO COMMENTS

LEAVE A REPLY

Please enter your comment!
Please enter your name here

Exit mobile version