ಲಕ್ನೋ: ಉತ್ತರ ಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವಕೀಲರೊಬ್ಬರನ್ನು ಗುಂಡಿಕ್ಕಿ ಹತ್ಯೆ ನಡೆಸಲಾಗಿದೆ.
ನ್ಯಾಯಾಲಯದ ಮೂರನೇ ಮಹಡಿಯಲ್ಲಿ ವಕೀಲರ ಮೃತದೇಹ ಪತ್ತೆಯಾಗಿದೆ. ಮಾತ್ರವಲ್ಲ ಮೃತದೇಹದ ಬಳಿ ದೇಶಿ ನಿರ್ಮಿತ ಪಿಸ್ತೂಲು ಕಂಡುಬಂದಿದೆ.
ಉನ್ನತ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.