ಕಲ್ಲಡ್ಕ ಭಟ್‌ ಜಾಮೀನಿಗೆ ವಾದಿಸಿದ ವಕೀಲ ಕಾಂಗ್ರೆಸ್‌ನಿಂದ ವಜಾ

Prasthutha|

ಮಂಡ್ಯ:ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾನೂನು ಘಟಕದ ತಾಲ್ಲೂಕು ಅಧ್ಯಕ್ಷ ಡಿ. ಚಂದ್ರೇಗೌಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆ‌ರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕ‌ರ್ ಭಟ್‌ಗೆ ನೀರಿಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲ ಡಿ.ಚಂದ್ರೇಗೌಡರ ವಿರುದ್ಧ ಈ ಮೂಲಕ‌ ಕ್ರಮಕೈಗೊಂಡಿದೆ.

- Advertisement -

ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಭಾಷಣ ಮಾಡಿದ, ಪ್ರಚೋದನಕಾರಿ ಬಾಷಣ ಮಾಡಿದ ಮುಂತಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಕಲ್ಲಡ್ಕ ಪ್ರಭಾಕರ್ ಪರ ವಕಾಲತ್ತು ವಹಿಸಿದ ಚಂದ್ರೇಗೌಡ, ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಕೊಡಿಸುವಲ್ಲಿ ಯಶಸ್ಸಾಗಿದ್ದರು. ಅವರ ಈ ನಡವಳಿಕೆಯು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ನಿಯಮ ನಿಬಂಧನೆಗಳಿಗೆ ವಿರುದ್ಧವಾಗಿರುವುದರಿಂದ ಅವರನ್ನು ಶ್ರೀರಂಗಪಟ್ಟಣ ತಾಲ್ಲೂಕು ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಕಾನೂನು ಘಟಕದ ಮಂಡ್ಯ ಜಿಲ್ಲಾಧ್ಯಕ್ಷ ಎ.ಎಸ್‌. ಗೌರಿಶಂಕರ್ ತಿಳಿಸಿದ್ದಾರೆ.



Join Whatsapp