ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ: ಲಕ್ಷ್ಮಣ್ ಸವದಿ

Prasthutha|

ಬೆಳಗಾವಿ: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಡಿಸಿಎಂ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್‌ ಸವದಿ  ಘೋಷಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಥಣಿ ಕ್ಷೇತ್ರದಲ್ಲಿ ನನಗೆ ಟಿಕೆಟ್ ನಿರಾಕರಿಸಲಾಗಿದೆ. ನನ್ನ ಹೈಕಮಾಂಡ್ ಕ್ಷೇತ್ರದ ಜನರೇ ಆಗಿದ್ದಾರೆ. ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ಅಭಿಮಾನಿಗಳೊಂದಿಗೆ ಚರ್ಚೆ ಮಾಡಿ ನಾಳೆ ಸಂಜೆ ಅಂತಿಮ ತೀರ್ಮಾನ ಪ್ರಕಟಿಸುತ್ತೇನೆ ಎಂದು ಹೇಳಿದರು.

ಇದರ ಜತೆಗೆ ಮೇಲ್ಮನೆ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಸವದಿ ಪ್ರಕಟಿಸಿದ್ದಾರೆ.

- Advertisement -

ಮೊದಲೇ ನನ್ನ ಕರೆದು ನಿನಗೆ ಟಿಕೆಟ್ ಇಲ್ಲ ಎಂದು ಹೇಳಿದ್ದರೆ ನಾನು ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೆ. ಸೌಜನ್ಯಕ್ಕಾದರೂ ಮೊದಲು ನನ್ನ‌ ಜತೆಗೆ ಚರ್ಚೆ ಮಾಡಬೇಕಿತ್ತು ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಸವಧಿ ತೀವ್ರ ಅಸಮಾಧಾನ ಹೊರ ಹಾಕಿದರು.

ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವವನು ನಾನಲ್ಲ. ನಾನು ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗಟ್ಟ ರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲಿ ನಾನು ಇಲ್ಲ. ಜಿಲ್ಲೆಯಲ್ಲಿ ಯಾರು ಬೆನ್ನಿಗೆ ಚೂರಿ ಹಾಕಿಲ್ಲ ಎಂದು ಪರೋಕ್ಷವಾಗಿ ರಮೇಶ ಜಾರಕಿಹೊಳಿ ವಿರುದ್ದ ಗುಡುಗಿದರು.   

Join Whatsapp