Home ಟಾಪ್ ಸುದ್ದಿಗಳು ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಟ್ರಕ್ ಚಾಲಕನ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲು

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಟ್ರಕ್ ಚಾಲಕನ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲು

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಸಂಬಂಧ ನಿನ್ನೆ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೇ ಇದೇ ಸರ್ಕಾರಿ ಚಾಲಕನು ಟ್ರಕ್ ವಾಹನ ಚಾಲಕನ ವಿರುದ್ಧ ದೂರು ನೀಡಿದ್ದಾರೆ.

ಟ್ರಕ್ ಚಾಲಕ ತಮ್ಮನ್ನು ಓವರ್​ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾತವಾಗಿದೆ ಎಂದು ಕಾರಿನ ಚಾಲಕ ಜಿ. ಶಿವಪ್ರಸಾದ್ ಅವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಕಿತ್ತೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಿಎನ್​ಎಸ್ ಕಾಯ್ದೆ ಅಡಿ 281, 125ಎ, 125 ಬಿ, ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ 134, 187 ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೂರಿನಲ್ಲಿರುವ ಮಾಹಿತಿ ಪ್ರಕಾರ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮುಂದಿದ್ದ ಟ್ರಕ್ ಚಾಲಕನ ಅಜಾಗರೂಕ ಚಾಲನೆ ಈ ಘಟನೆಗೆ ಕಾರಣವಾಗಿದೆ. ಯಾವುದೇ ಸೂಚನೆ ಇಲ್ಲದೇ ಟ್ರಕ್ ಎಡಬದಿಗೆ ಬಂದಿದ್ದರಿಂದ ಅದು ಇನ್ನೋವಾ ಹೈಕ್ರಾಸ್ ಕಾರಿಗೆ ತಾಗಿಸಿದೆ. ಇದರಿಂದ ಈ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Join Whatsapp
Exit mobile version