ತಿರುವನಂತಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದೆ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿಪಿಎಂ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ ವಾಗ್ದಾಳಿ ನಡೆಸಿದೆ.
ಶಿಕ್ಷಣ ಸಚಿವ ವಿ.ಶಿವನಕುಟ್ಟಿ ಮಾತನಾಡಿ, ಚಂದ್ರಶೇಖರ್ ಅವರು ಹೆಲಿಕಾಪ್ಟರ್ ಮೂಲಕ ಕರ್ನಾಟಕಕ್ಕೆ ತೆರಳಿ ಮತ ಚಲಾಯಿಸಿ ಮರಳಿ ತಿರುವನಂತಪುರಕ್ಕೆ ವಾಪಸ್ ಆಗುವ ಸಾಮರ್ಥ್ಯವುಳ್ಳ ವ್ಯಕ್ತಿಯಾಗಿದ್ದರು. ಆದರೆ, ಮತದಾನದಿಂದ ದೂರ ಉಳಿದಿರುವ ಅವರ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ’ ಎಂದು ಟೀಕಿಸಿದ್ದಾರೆ.
‘ನಾನು ತಿರುವನಂತಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದರಿಂದ ನನಗೆ ಈ ಕ್ಷೇತ್ರವೇ ಪ್ರಮುಖ ಆದ್ಯತೆಯಾಗಿದೆ. ಚುನಾವಣಾ ದಿನದಂದು ಕ್ಷೇತ್ರದಲ್ಲಿರುವುದು ನನ್ನ ಕರ್ತವ್ಯ. ಹಾಗಾಗಿ ನಾನು ಮತ ಚಲಾಯಿಸಲು ಕರ್ನಾಟಕಕ್ಕೆ ಹೋಗಲಿಲ್ಲ’ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದರು.