ಮೃತ ಪ್ರವೀಣ್ ಮನೆಗೆ ನಾಯಕರ ದೌಡು; ಸರಕಾರಿ ಉದ್ಯೋಗ ಮತ್ತು ಹೊಸ ಮನೆ ಕಟ್ಟಿಕೊಡುವ ಭರವಸೆ

Prasthutha|

ಸುಳ್ಯ: ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಪೂಜಾರಿ ನೆಟ್ಟಾರು ಅವರ ಮನೆಗೆ ಇಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಸಚಿವ ಎಸ್. ಅಂಗಾರ, ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಶಾಸಕರಾದ ಬಂಟ್ವಾಳದ ರಾಜೇಶ್ ನಾಯಕ್ ಉಳಿಪಾಡಿಗುತ್ತು , ಬೆಳ್ತಂಗಡಿಯ ಹರೀಶ್ ಪೂಂಜಾ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮೊದಲಾದವರು ಭೇಟಿ ನೀಡಿದ್ದಾರೆ.

- Advertisement -

ಪ್ರವೀಣ್ ಅವರ ಪತ್ನಿ , ಹೆತ್ತವರು ಹಾಗೂ ಕುಟುಂಬಿಕರ ನೋವನ್ನು ಆಲಿಸಿದ ನಾಯಕರು  ಪರಸ್ಪರ ಸಮಾಲೋಚಿಸಿ ಪ್ರವೀಣ್ ಪತ್ನಿಗೆ ಸರಕಾರಿ ಉದ್ಯೋಗ ಹಾಗೂ ಪ್ರವೀಣರ ಮನೆಯನ್ನು ಹೊಸದಾಗಿ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.

ನಾಯಕರೊಂದಿಗಿನ ಸಮಾಲೋಚನೆಯ  ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಜಯೇಂದ್ರ, ‘ಹತ್ಯೆಕೋರರ ಮೇಲೆ ಸರಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಪ್ರವೀಣ್ ಪತ್ನಿ ಗೆ ಸರಕಾರಿ ಉದ್ಯೋಗ ಕೊಡಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಮನೆ ಶಿಥಿಲಾವಸ್ಥೆಯಲ್ಲಿದ್ದು ಹೊಸದಾಗಿ ಅದರ ನಿರ್ಮಾಣದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

Join Whatsapp
Exit mobile version