ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಅಗತ್ಯ : ಶಶಿ ತರೂರ್

Prasthutha|

ಹೊಸದಿಲ್ಲಿ: ಕಾಂಗ್ರೆಸ್’ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಅಗತ್ಯ ವಿದೆ ಎಂದು ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿದ್ದಾರೆ.

- Advertisement -

ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ತೀವ್ರ ಹಿನ್ನಡೆ ಅನುಭವಿಸಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಗೆಲುವು ಸಿಗಬೇಕು. ಜನರ ವಿಶ್ವಾಸ ಗೆಲ್ಲಬೇಕು ಎಂದಾದಲ್ಲಿ ಪಕ್ಷದ ಸಂಘಟನೆ ಹಾಗೂ ನಾಯಕತ್ವ ಬಲಗೊಳ್ಳುವುದು ಅಗತ್ಯ ಮತ್ತು ಅನಿವಾರ್ಯ’ ಎಂದು ಅವರು ಹೇಳಿದರು.

‘ಕಾಂಗ್ರೆಸ್‌ ನ ಕನಸಿನ ಭಾರತವನ್ನು ಕಟ್ಟಬೇಕು. ಕಾಂಗ್ರೆಸ್‌ನ ಶಕ್ತಿಯಲ್ಲಿ ನಂಬಿಕೆ ಹೊಂದಿರುವ ನಮಗೆ ಚುನಾವಣೆಯ ಫಲಿತಾಂಶದಿಂದ ನೋವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Join Whatsapp