ಬೆಂಗಳೂರು: ಹಿಜಾಬ್ ಧರಿಸುವ ಹಕ್ಕನ್ನು ಮುಂದುವರಿಸುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್’ನಲ್ಲಿ ಸಲ್ಲಿಸಿದ್ದ ಅರ್ಜಿಯ ಅಂತಿಮ ತೀರ್ಪು ಇನ್ನೂ ಬಾರದ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಿಸಲಾಗಿದ್ದ ರಜೆಯನ್ನು ಫೆಬ್ರವರಿ 16, ಬುಧವಾರದವರೆಗೆ ಮುಂದುವರಿಸಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಸ್ ಹಿರೇಮಠ ಅವರು ಸುತ್ತೋಲೆ ಹೊರಡಿಸಿದ್ದು, ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇದು ಅನ್ವಯವಾಗಲಿದೆ.
ಆದರೆ ಸದರಿ ದಿನಾಂಕಗಳಲ್ಲಿ ನಡೆಯುವ ಪರೀಕ್ಷೆಗಳು ಯಥಾವತ್ತಾಗಿ ನಡೆಯಲಿದೆ.