ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ

Prasthutha|

ಬೆಂಗಳೂರು; ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ಘೋಷಿಸುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

- Advertisement -

ಶಾಲೆಗಳಿಗೆ ರಜೆ ಘೋಷಣೆ ಮಾಡುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಬಂದು ಹೋಗಲು ತೊಂದರೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮಳೆಯ ಕಾರಣದ ರಜಾ ದಿನದ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ನ.19 ಮತ್ತು 20ರಂದು 2 ದಿನಗಳ ಅವಧಿಗೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸುವಂತೆ ಮೌಖಿಕವಾಗಿ ಆದೇಶಿಸಿದ್ದಾರೆ.

- Advertisement -

ಭಾರತೀಯ ಹವಾಮಾನ ಇಲಾಖೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬೆಳಗ್ಗೆ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗ್ಗೆ 8.30ರತನಕ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

Join Whatsapp