ಮೂಗಿಗೆ ನಿಂಬೆ ಹಣ್ಣಿನ ರಸ ಹಾಕಿಕೊಂಡ ಶಿಕ್ಷಕ ನರಳಿ ಸಾವು

Prasthutha: April 28, 2021

►ಇತ್ತೀಚೆಗೆ ಸುದ್ದಿಯಾಗಿತ್ತು ವಿಜಯ ಸಂಕೇಶ್ವರರ ನಿಂಬೆ ರಸದ ಹೇಳಿಕೆ!

ರಾಯಚೂರು : ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕಿಸಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಎಂದು ಗುರುತಿಸಲಾಗಿದೆ. ಆರೋಗ್ಯವಾಗಿದ್ದ ಇವರು ಮೂಗಿನೊಳಗೆ ನಿಂಬೆ ಹಣ್ಣಿನ ರಸ ಹಾಕಿಸಿಕೊಂಡ ಬಳಿಕ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇತ್ತೀಚೆಗಷ್ಟೆ ಭಾರೀ ಸುದ್ದಿಯಾಗಿತ್ತು ವಿಜಯ್ ಸಂಕೇಶ್ವರ್ ಹೇಳಿಕೆ!

ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕುವುದರಿಂದ ಆಕ್ಸಿಜನ್ ಸಮಸ್ಯೆ ನಿವಾರಣೆಯಾಗುತ್ತದೆ, ಇದನ್ನು ಸ್ವತಹ ನಾನೂ ಪ್ರಯತ್ನ ಮಾಡಿದ್ದೇನೆ ಎಂದು ಇತ್ತೀಚೆಗಷ್ಟೆ ವಿಆರ್‌ಎಲ್ ಸಮೂಹ ಸಂಸ್ಥೆಯ ಮುಖ್ಯಸ್ಥ ವಿಜಯ್ ಸಂಕೇಶ್ವರ್ ಹೇಳಿಕೆ ನೀಡಿದ್ದರು. ಈ ವಿಚಾರ ಬಹಳಷ್ಟು ಗ್ರಾಸವಾಗಿತ್ತಲ್ಲದೇ ಪರ ವಿರೋಧದ ಚರ್ಚೆಗೂ ಕಾರಣವಾಗಿತ್ತು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!