Home ಟಾಪ್ ಸುದ್ದಿಗಳು ಹುಟ್ಟು ಹಬ್ಬದಂದೇ ಉಪನ್ಯಾಸಕಿ ಆತ್ಮಹತ್ಯೆ: ಡೆತ್ ನೋಟ್‌ ನಲ್ಲಿ ಬಯಲಾದ ಅಸಲಿ ಸತ್ಯ

ಹುಟ್ಟು ಹಬ್ಬದಂದೇ ಉಪನ್ಯಾಸಕಿ ಆತ್ಮಹತ್ಯೆ: ಡೆತ್ ನೋಟ್‌ ನಲ್ಲಿ ಬಯಲಾದ ಅಸಲಿ ಸತ್ಯ

ಚಾಮರಾಜನಗರ: ಖಾಸಗಿ ಕಾಲೇಜಿನ ಉಪನ್ಯಾಸಕಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ನಲ್ಲಿ ಕಾರಣ ಹೇಳಿದ್ದಾರೆ.

ಆತ್ಮಹತ್ಯೆಗೂ ಮುನ್ನ ಚಂದನಾ ಡೆತ್‍ ನೋಟ್ ಬರೆದಿಟ್ಟಿದ್ದು, ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನ್ನ ಇಬ್ಬರು ಅಕ್ಕಂದಿರಿಗೆ ಸಾರಿ ಕೇಳಿರುವ ಚಂದನಾ, ತಂಗಿಯನ್ನು ಉದ್ದೇಶಿಸಿ ಯಾವುದೇ ಕಾರಣಕ್ಕೂ ಉಪನ್ಯಾಸಕಿ ಹುದ್ದೆಗೆ ಬರಬೇಡ ಎಂದು ತನ್ನ ಕೊನೆಯ ಸಲಹೆಯನ್ನು ಕೊಟ್ಟಿದ್ದಾರೆ.

ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ(26) ಚಾಮರಾಜನಗರದ ಜೆಎಸ್‍ ಎಸ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್‍ ಎಸ್ ಕಾಲೇಜಿನ ಹಾಸ್ಟೆಲ್‍ನಲ್ಲೇ ವಾಸ್ತವ್ಯ ಹೂಡಿದ್ದಳು. ಈಕೆ ಎಲ್ಲರ ಜೊತೆಯಲ್ಲೂ ಉತ್ತಮ ಬಾಂದವ್ಯ ಹೊಂದಿದ್ದಳು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು, ವಿದ್ಯಾರ್ಥಿಗಳು ಶುಭಾಶಯ ಕೋರಿದ್ದರು. ಆದರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ.

Join Whatsapp
Exit mobile version