Home ಟಾಪ್ ಸುದ್ದಿಗಳು ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದರೆ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದರೆ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಇನ್ನು ಮುಂದೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಗೆ ಹೋಗುವಂತಿಲ್ಲ. ಈಗಾಗಲೇ ಈ ಸಂಬಂಧ ಹೈಕೋರ್ಟ್ ತೀರ್ಪು ನೀಡಿದೆ. ಒಂದು ವೇಳೆ ಬಲವಂತದಿಂದ ತರಗತಿ ಪ್ರವೇಶಿಸಿದರೆ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಇನ್ನು ಸಹಿಸಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ. ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಪ್ರಯತ್ನಿಸುವವರ ವಿರುದ್ಧ ಖಂಡಿತಾ ಕ್ರಮವಾಗಲಿದೆ ಎಂದು ಎಚ್ಚರಿಸಿದರು.

ಎರಡು ವರ್ಷಗಳಿಂದ ಶಿಕ್ಷಣ ಹಾಳಾಗಿದೆ. ಈ ವರ್ಷವಾದರೂ ಶಿಕ್ಷಣ ಸಿಗಲಿ, ಯಾರೋ ಮತಾಂಧರು ವಿದ್ಯಾರ್ಥಿಗಳ ತಲೆಗೆ ಮತಾಂಧತೆ ತುಂಬಿದ್ದಾರೆ. ನಾವೆಲ್ಲಾ ಈ ದೇಶದ ಮಕ್ಕಳು ಎಂಬ ಭಾವನೆ ಶಾಲೆಯಿಂದಲೇ ಆಗಬೇಕು ಎಂದರು.

Join Whatsapp
Exit mobile version