ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳಿಗೆ ಸಂಬಂಧಿಸಿದಂತೆ, ವಿವಾದದ ಕಿಡಿಹೊತ್ತಿಸಿದ ಕಾಳಿ ಸ್ವಾಮಿ ವಿರುದ್ದ ಪೊಲೀಸರು ದಿಟ್ಟ ಕ್ರಮಕೈಗೊಳ್ಳುತ್ತಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಕಾರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಕೂಡ ಹೇಳಿದ್ದಾರೆ.