ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರುಗಳಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಸ್ಯಾಂಟ್ರೋ ರವಿ ವಿರುದ್ಧ ಯಾವುದಾದರೂ ದೂರುಗಳಿದ್ದರೆ, ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿಯನ್ನು ನನಗೆ ಪರಿಚಯವಿಲ್ಲ, ಪ್ರತಿನಿತ್ಯ ನನ್ನನ್ನು ನೂರಾರು ಜನರು ಅಹವಾಲು ಸಲ್ಲಿಸಲು ಭೇಟಿಯಾಗುತ್ತಾರೆ, ಕಾಣಲು ಬರುವ ಎಲ್ಲರ ಹಿನ್ನೆಲೆ ಚರಿತ್ರೆ ಬಗ್ಗೆ ಮಾಹಿತಿ ಇರುವುದಿಲ್ಲ ಸ್ಯಾಂಟ್ರೋ ರವಿ  ಬಗ್ಗೆ ಎಚ್ ಡಿ ಕುಮಾರಸ್ವಾಮಿಯವರಿಗೆ ಹೆಚ್ಚಿನ ಮಾಹಿತಿ ಇರಬೇಕು. ಆತ ಯಾವುದಾದರೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Join Whatsapp