Home ಟಾಪ್ ಸುದ್ದಿಗಳು ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣ; ಮುಲಾಜಿಲ್ಲದೆ ಕಾನೂನು ಕ್ರಮ: ಪರಮೇಶ್ವರ್

ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣ; ಮುಲಾಜಿಲ್ಲದೆ ಕಾನೂನು ಕ್ರಮ: ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿ ಅಂಜಲಿ ಅಂಬಿಗೇರ (20) ಹತ್ಯೆ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ. ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಅಂತ ಕೊಲೆಯಾದ ಅಂಜಲಿ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ, ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದೇವು ಅಂತ ಅಂದಿದ್ದಾರೆ. ಸದ್ಯ ಕೊಲೆ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ, ಯಾವುದೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Join Whatsapp
Exit mobile version