ವಿಧಾನ ಪರಿಷತ್ ಚುನಾವಣೆ: ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

Prasthutha|

ಮಂಗಳೂರು: ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

- Advertisement -


ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ , ಮುಖಂಡರಾದ ಶಾಹುಲ್ ಹಮೀದ್, ಮಿಥುನ್ ರೈ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

Join Whatsapp