ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

Prasthutha|

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಈಗ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

- Advertisement -

ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.


ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.

Join Whatsapp