ಫರಂಗಿಪೇಟೆಯಲ್ಲಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ಆತಂಕ

ಬಂಟ್ವಾಳ: ಚಿರತೆಯೊಂದು ಕಾಣಿಸಿಕೊಂಡ ಘಟನೆ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.
ಫರಂಗಿಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.


ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಗಲ್ಲು ಮಸೀದಿಯ ಬಳಿಯಿಂದ ಹುಲಿಯೊಂದು ರಸ್ತೆ ದಾಟಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದು ಹುಲಿಯೂ ಅಥವಾ ದೊಡ್ಡ ಗಾತ್ರದ ಚಿರತೆ ಆಗಿರುವ ಸಾಧ್ಯತೆಯೂ ಇದೆ ಎಂದು ತಿಳಿಸಿದ್ದಾರೆ.

- Advertisement -


ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.