Home ಟಾಪ್ ಸುದ್ದಿಗಳು ಕರ್ನಾಟಕದಿಂದ ಕಡಿಮೆ ಪ್ರಮಾಣದಲ್ಲಿ ನೀರು ಬಿಡುಗಡೆ: ಇಂದು ತಮಿಳುನಾಡು ಸರ್ವಪಕ್ಷಗಳ ಸಭೆ

ಕರ್ನಾಟಕದಿಂದ ಕಡಿಮೆ ಪ್ರಮಾಣದಲ್ಲಿ ನೀರು ಬಿಡುಗಡೆ: ಇಂದು ತಮಿಳುನಾಡು ಸರ್ವಪಕ್ಷಗಳ ಸಭೆ

ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರಿನ ಪ್ರಮಾಣ ಕಡಿಮೆ ಮಾಡಿರುವ ರ್ನಾಟಕ ಸರ್ಕಾರದ ನಿಲುವನ್ನು ಖಂಡಿಸಿದ ತಮಿಳುನಾಡು ಸರ್ಕಾರ, ಇಂದು ಸರ್ವಪಕ್ಷಗಳ ಸಭೆ ಕರೆದಿದೆ.

ಅಂತರ ರಾಜ್ಯ ನದಿ ವಿವಾದದಲ್ಲಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಪ್ರಸ್ತುತದಲ್ಲಿನ ನೈರುತ್ಯ ಮುಂಗಾರು ಹಾಗೂ ಕರ್ನಾಟಕದ ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಳ ಪರಿಗಣಿಸಿ ಈ ಮಾಸಾಂತ್ಯದವರೆಗೂ ಪ್ರತಿದಿನ ಒಂದು ಟಿಎಂಸಿ ಅಡಿ ಬಿಡುಗಡೆ ಮಾಡಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನಿರ್ದೇಶನ ನೀಡಿದೆ. ಆದರೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿರುವುದು ಆಘಾತಕಾರಿಯಾಗಿದೆ. ಈ ನಿರ್ದೇಶನವನ್ನು ಕೂಡಲೇ ಜಾರಿಗೊಳಿಸುವಂತೆ ಕೋರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಸಮಿತಿ ಆದೇಶವನ್ನು ಕರ್ನಾಟಕ ಪಾಲಿಸದಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

Join Whatsapp
Exit mobile version