ತರಬೇತಿ ನಿರತ IAS ಅಧಿಕಾರಿಗಳಿಗೆ ಗ್ರಾ.ಪಂ ಅಧ್ಯಕ್ಷರಿಂದ ಪಾಠ!

Prasthutha|

ವಿಜಯನಗರ: ತರಬೇತಿ ಪಡೆಯುತ್ತಿರುವ ಐಎಎಸ್ ಅಧಿಕಾರಿಗಳಿಗೆ ಪಾಠ ಮಾಡುವ ಅವಕಾಶವೊಂದು ವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಒಲಿದು ಬಂದಿದೆ.

- Advertisement -


ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ದೇವಗೊಂಡನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಂದ್ರ ಅವರು ಉತ್ತರಾಖಂಡ ರಾಜ್ಯದ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ನಲ್ಲಿ ಸುಮಾರು 500 ತರಬೇತಿನಿರತ ಐಎಎಸ್ ಅಧಿಕಾರಿಗಳಿಗೆ ಆಗಸ್ಟ್ 30 ರಂದು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ನೀಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಕೈಗೊಂಡಿರುವ ವಿವಿಧ ಯೋಜನೆಗಳ ವಿವರ ಹಾಗೂ ಅವುಗಳ ಯಶಸ್ವಿ ಅನುಷ್ಠಾನ ಮಾಡುವ ಪ್ರಕ್ರಿಯೆ ಕುರಿತು ತಮ್ಮ ಕಾರ್ಯಾನುಭವ ಹಂಚಿಕೊಳ್ಳಲಿದ್ದಾರೆ.


ಡಿಪ್ಲೊಮಾ ಪದವೀಧರರಾದ ಮಹೇಂದ್ರ, ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಾರಣಾಂತರಗಳಿಂದ ಕೆಲಸ ಬಿಟ್ಟು ಸ್ವಗ್ರಾಮದಲ್ಲಿ ಸಮಾಜ ಸೇವೆ ಮಾಡಲು ಮುಂದಾಗಿ ರಾಜಕೀಯಕ್ಕೆ ಕಾಲಿಟ್ಟರು. ಇದೀಗ ಗ್ರಾಪಂ ಅಧ್ಯಕ್ಷರಾಗಿರುವ ಇವರು ಗುಜುನೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಂದ ಮೀನಿನಾಕಾರದ ಕೆರೆ ನಿರ್ಮಾಣ ಮಾಡಿಸಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.

Join Whatsapp
Exit mobile version