ಸರ್ಕಾರ ಪತನ ಆಗುವ ಕನಸು ಹೆಚ್‌ಡಿಕೆ ಕಾಣುತ್ತಲೇ ಇರಲಿ: ಚಲುವರಾಯಸ್ವಾಮಿ ವ್ಯಂಗ್ಯ

Prasthutha|

ನಾಗಮಂಗಲ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ ಆಗಲಿದೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ಮತ್ತು ವ್ಯಂಗ್ಯದ ಪ್ರತಿಕ್ರಿಯೆ ತೋರಿಸುತ್ತಿದ್ದಾರೆ. ಸರಕಾರ ಪತನ ಆಗುತ್ತೆ ಎಂದು ಕುಮಾರಸ್ವಾಮಿ ಕನಸು ಕಾಣುತ್ತಲೇ ಇರಲಿ. ನಾವು ಮಾತ್ರ ಇದೇ ರೀತಿ ಅಧಿಕಾರದಲ್ಲಿ ಮುಂದುವರಿಯುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವ್ಯಂಗ್ಯಮಿಶ್ರಿತ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಕಾಂಗ್ರೆಸ್ ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಇಡೀ ಸಚಿವ ಸಂಪುಟ, ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ 20 ಸ್ಥಾನಗಳಲ್ಲಿ ಗೆಲ್ಲುತ್ತೇವೆ. 5 ವರ್ಷ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದೆ ಎಂದು ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆ ನಂತರ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಶ್ರೀರಘುರಾಮಪುರ ಗೇಟ್ ಮಾರ್ಗವಾಗಿ ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎನ್.ಚಲುವರಾಯಸ್ವಾಮಿ ತಿಳಿಸಿದರು.

Join Whatsapp