ಇಸ್ರೇಲ್- ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಮಾನವೀಯ ನೆಲೆಯಲ್ಲಿ ತಕ್ಷಣವೇ ನಿಲ್ಲಿಸಬೇಕು ಮತ್ತು ಬೇಷರತ್ತಾಗಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕೆಂಬ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.
ವಿಶ್ವಸಂಸ್ಥೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಲ್ಜೀರಿಯಾ, ಬಹ್ರೈನ್, ಇರಾಕ್, ಕುವೈಟ್, ಓಮಾನ್, ಕತಾರ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಪ್ಯಾಲೆಸ್ತೇನ್ ಸೇರಿದಂತೆ ಹಲವು ದೇಶಗಳು ಇಸ್ರೇಲ್-ಹಮಾಸ್ ನಡುವೆ ತಕ್ಷಣವೇ ಕದನವಿರಾಮ ಘೋಷಿಸಬೇಕೆಂದು ಒತ್ತಾಯಿಸಿ ನಿರ್ಣಯ ಕೈಗೊಂಡಿದ್ದವು. ಭಾರತ ಈ ನಿರ್ಣಯದ ಪರವಾಗಿ ಮತ ಚಲಾಯಿಸಿದೆ.
ಅಮೆರಿಕ, ಇಸ್ರೇಲ್ ಸೇರಿದಂತೆ ಹತ್ತು ದೇಶಗಳು ವಿರೋಧಿಸಿ ಮತ ಚಲಾಯಿಸಿವೆ. ಸುಮಾರು 23 ದೇಶಗಳು ಸಭೆಗೆ ಗೈರುಹಾಜರಾಗಿವೆ ಎಂದು ವರದಿ ತಿಳಿಸಿದೆ.