ಕರ್ನಾಟಕ ಮತ್ತಷ್ಟು ಅಭಿವೃದ್ಧಿಯಾಗಲಿ: ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

Prasthutha|

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕರ್ನಾಟಕ್ಕೆ ಕನ್ನಡದಲ್ಲಿಯೇ X ಮಾಡಿ ಶುಭ ಹಾರೈಸಿದ್ದಾರೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ.

- Advertisement -

ಕರ್ನಾಟಕ ಮತ್ತಷ್ಟು ಅಭಿವೃದ್ಧಿ ಕಾಣಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಅಂತ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲೇ ಶುಭ ಕೋರಿದ್ದಾರೆ.



Join Whatsapp