ನವದೆಹಲಿ: ಕೇಜ್ರಿವಾಲ್ ಜೈಲಿನಿಂದ ಸರ್ಕಾರವನ್ನು ನಡೆಸಿದರೆ, ಅದು ದೇಶದಲ್ಲಿ ಬಹಳ ತಪ್ಪು ಪ್ರವೃತ್ತಿಯನ್ನು ಹುಟ್ಟುಹಾಕುತ್ತದೆ ಎಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಹೇಳಿದ್ದಾರೆ.
2011 ಮತ್ತು 2014 ರ ನಡುವೆ ಭಾರತದಲ್ಲಿ ಭ್ರಷ್ಟಾಚಾರ ವಿರೋಧಿ ಆಂದೋಲನದ ಸಮಯದಲ್ಲಿ ಅನೇಕ ಸಚಿವರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದರು ಎಂದು ನೆನಪಿಸಿಕೊಂಡ ಸಂಜಯ್ ನಿರುಪಮ್, ನೈತಿಕ ನೆಲೆಯಲ್ಲಿ ಬಹಳ ಮುಖ್ಯವಾದ ನಿಲುವನ್ನು ಕಾಂಗ್ರೆಸ್ ತೆಗೆದುಕೊಂಡಿತು. ಆ ಸಮಯದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಯುಪಿಎ ಸಚಿವರೆಲ್ಲರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಕೇಜ್ರಿವಾಲ್ ಕೂಡ ರಾಜೀನಾಮೆ ನೀಡಬೇಕು ಎಂದಿದ್ದಾರೆ.
ಕೇಜ್ರಿವಾಲ್ ಅವರು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದಾರೆ ಎಂದು ನನಗೆ ತಿಳಿದಿದೆ. ಅವರ ಬಗ್ಗೆ ಕಾಂಗ್ರೆಸ್ ನಿಲುವು ತಳೆದಿದೆ ಮತ್ತು ನಾನು ಅದನ್ನು ಬೆಂಬಲಿಸುತ್ತೇನೆ. ಆದರೆ, ನಮ್ಮ ದೇಶದ ರಾಜಕೀಯದಲ್ಲಿ ನೈತಿಕತೆ ಎಂಬ ಪದಕ್ಕೆ ಬಹಳ ಮಹತ್ವವಿದೆ. ಕೇಜ್ರಿವಾಲ್ ಅವರು ತಮ್ಮನ್ನು ಪ್ರಾಮಾಣಿಕರೆಂದು ಕರೆದರೆ, ಅವರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.