ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ರಾಹುಲ್ ಗಾಂಧಿಗೆ ತಾನೇನು ಮಾತಾಡುತ್ತೇನೆ ಅಂತಾ ಅವರಿಗೆ ಗೊತ್ತಿಲ್ಲ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಬಿಜೆಪಿಯಿಂದ ನಡೆದ ಎಸ್‌ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರ ರಚಿಸಲು ಬೇಕಾಗುವಷ್ಟು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧಿಸಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಇಂತಹ ದಯಾನಿಯ ಸ್ಥಿತಿಗೆ ತಲುಪಿದೆ ಎಂದು ಕಿಡಿಕಾರಿದ್ದಾರೆ.