ಎನ್ ಇಪಿ ಪುನರ್ ಪರಿಶೀಲಿಸಲಿ, ಇಲ್ಲದಿದ್ದರೆ ಹೋರಾಟ: ಬೊಮ್ಮಾಯಿ

Prasthutha|

ಬೆಂಗಳೂರು: ಎನ್ ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇವತ್ತಿನ ಕಾಲಘಟ್ಟಕ್ಕೆ ಅನುಗುಣವಾಗಿ ನೂತನ ಶಿಕ್ಷಣ ನೀತಿಯನ್ನು (ಎನ್ಇಪಿ) ರೂಪಿಸಲಾಗಿದೆ. ಎನ್ಇಪಿ ಕರಡಿಗೆ ಸಿದ್ದರಾಮಯ್ಯನವರ 2013-18ರ ಅವಧಿಯ ಸರಕಾರ ಒಪ್ಪಿಗೆ ಕೊಟ್ಟಿತ್ತು. ಅದರ ನೇತೃತ್ವವನ್ನು ಕಸ್ತೂರಿರಂಗನ್ ಅವರು ವಹಿಸಿದ್ದರು. ಕರ್ನಾಟಕದ ಶಿಕ್ಷಣ ನೀತಿ ರಚಿಸಿದ್ದ ಕಸ್ತೂರಿರಂಗನ್ ಅವರೇ ಇಡೀ ದೇಶದ ಎನ್ ಇಪಿ ಮಾಡಿದ್ದಾರೆ” ಎಂದು ವಿವರಿಸಿದರು.


“ಇದು ಮಕ್ಕಳ ಭವಿಷ್ಯದ ಬಗ್ಗೆ ಚೆಲ್ಲಾಟ ಎಂದು ಆಕ್ಷೇಪಿಸಿದರು. ಇಡೀ ದೇಶದಲ್ಲಿ ಇರುವ ವ್ಯವಸ್ಥೆ ನಮ್ಮ ರಾಜ್ಯದಲ್ಲಿ ಇಲ್ಲದಿದ್ದರೆ ನಮ್ಮ ಮಕ್ಕಳು ಪೈಪೋಟಿ ಮಾಡುವುದು ಹೇಗೆ? ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬಹಳ ದೊಡ್ಡ ಹಿನ್ನಡೆ ಆಗಲಿದೆ. ಸಿದ್ದರಾಮಯ್ಯನವರು ರಾಜಕೀಯ ಕಾಮಾಲೆ ಕಣ್ಣಿನಿಂದ ನೋಡದೆ ಮಕ್ಕಳ ಉಜ್ವಲ ಭವಿಷ್ಯವನ್ನು ನೋಡಬೇಕು ಎಂದರು.

Join Whatsapp