ಎನ್ ಐಎ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಸಲಿ: ಎಸ್ ಡಿಪಿಐ

Prasthutha|

ಬೆಂಗಳೂರು: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮತ್ತು ಸುಳ್ಯ ಅಸೆಂಬ್ಲಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಅವರನ್ನು NIA ವಿಚಾರಣೆಗೆ ವಶಪಡಿಸಿಕೊಂಡಿರುವುದಾಗಿ ಮಾಧ್ಯಮ ವರದಿ ಮಾಡಿದೆ.

- Advertisement -

ಎನ್ ಐಎ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕ ತನಿಖೆ ನಡೆಸಲಿ ಎಂದು ಆಗ್ರಹಿಸುತ್ತೇನೆ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎನ್ಐಎ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

ಶನಿವಾರ ಎನ್ ಐಎ ಅಧಿಕಾರಿಗಳು ಸುಳ್ಯ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದರು. ಈ ವೇಳೆ ಕೆಲವು ಎಸ್ ಡಿಪಿಐ ಮುಖಂಡರನ್ನು ಬಂಧಿಸಿದ್ದರು.

Join Whatsapp