Home ಟಾಪ್ ಸುದ್ದಿಗಳು ಎನ್ ಐಎ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಸಲಿ: ಎಸ್ ಡಿಪಿಐ

ಎನ್ ಐಎ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಸಲಿ: ಎಸ್ ಡಿಪಿಐ

ಬೆಂಗಳೂರು: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮತ್ತು ಸುಳ್ಯ ಅಸೆಂಬ್ಲಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಅವರನ್ನು NIA ವಿಚಾರಣೆಗೆ ವಶಪಡಿಸಿಕೊಂಡಿರುವುದಾಗಿ ಮಾಧ್ಯಮ ವರದಿ ಮಾಡಿದೆ.

ಎನ್ ಐಎ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕ ತನಿಖೆ ನಡೆಸಲಿ ಎಂದು ಆಗ್ರಹಿಸುತ್ತೇನೆ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎನ್ಐಎ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಎನ್ ಐಎ ಅಧಿಕಾರಿಗಳು ಸುಳ್ಯ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದರು. ಈ ವೇಳೆ ಕೆಲವು ಎಸ್ ಡಿಪಿಐ ಮುಖಂಡರನ್ನು ಬಂಧಿಸಿದ್ದರು.

Join Whatsapp
Exit mobile version