ದಲಿತರಿಗಾಗಿ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆ ಜಾರಿಯಾಗಲಿ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲು

Prasthutha|

ಬೆಳಗಾವಿ: ಬಿಜೆಪಿ ದಲಿತ ಮತ್ತು ಶೋಷಿತ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಲಿತರು ಹಾಗೂ ಬುಡುಕಟ್ಟ ಸಮುದಾಯದ ಶ್ರೇಯೋಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಗಳನ್ನು (ಎಸ್ಸಿಪಿ/ಟಿಎಸ್ಪಿ) ಕಾಯ್ದೆ ಮಾಡಿ ಜಾರಿಗೆ ತನ್ನಿ‌ ನೋಡೋಣ ಎಂದು ಬಿಜೆಪಿ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಸವಾಲು ಹಾಕಿದ್ದಾರೆ.

- Advertisement -

ವಿಧಾನ ಪರಿಷತ್ತಿನಲ್ಲಿ ಗಪೂರಕ ಅಂದಾಜು ಮಂಡನೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ಕಾಯ್ದೆಯನ್ನು ಜಾರಿಗೆ ತರುವಂತೆ ಬಿಜೆಪಿ ನಾಯಕರನ್ನು ಕೇಳಿದ್ದಾರೆ. ಬಿಜೆಪಿ ಎಂಎಲ್ಸಿಗಳು ಮತ್ತು ಸಂಸದರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ, ದೇಶದಲ್ಲಿ ಇದೇ ರೀತಿಯ ಕಾಯ್ದೆಯನ್ನು ಜಾರಿಗೆ ತರುವಂತೆ ಸವಾಲು ಹಾಕುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾಯ್ದೆ ಕುರಿತು ವಿವರಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿನ ಎಸ್ಸಿ/ಎಸ್ಟಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ಮೀಸಲಿಡಲು ಕಾಂಗ್ರೆಸ್ ಸರ್ಕಾರ 2013ರಲ್ಲಿ ಕಾಯ್ದೆ ತಂದಿತ್ತು ಎಂದಿದ್ದಾರೆ.

- Advertisement -



Join Whatsapp