Home ಟಾಪ್ ಸುದ್ದಿಗಳು ಮೊದಲು SDPI ಬ್ಯಾನ್ ಮಾಡಲಿ ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ: ಮಾಜಿ ಸಿಎಂ ಬೊಮ್ಮಾಯಿ

ಮೊದಲು SDPI ಬ್ಯಾನ್ ಮಾಡಲಿ ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ: ಮಾಜಿ ಸಿಎಂ ಬೊಮ್ಮಾಯಿ

‘5 ತಿಂಗಳಲ್ಲಿ ರಾಜ್ಯದ ರಾಜಕಾರಣ ಬದಲಾಗಲಿದೆ’

ಹಾವೇರಿ: ಮೊದಲು SDPI ಬ್ಯಾನ್ ಮಾಡಲಿ ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನ್ನ ಉಸಿರು ಇರುವವರೆಗೂ ಶಿಗ್ಗಾವಿ ಕೇತ್ರದ ಜನರೊಂದಿಗೆ ಇರುತ್ತೇನೆ, ನನ್ನ ಜೀವನದ ಕೊನೆ ಉಸಿರಿನವರೆಗೂ ಕ್ಷೇತ್ರದ ಸೇವೆ ಮಾಡುತ್ತೇನೆ. ಸದಾ ಶಿಗ್ಗಾವಿ ಕ್ಷೇತ್ರದ ಜನರ ಸೇವೆಯಲ್ಲಿ ನನ್ನ ಜೀವನವನ್ನು ಸವೆಸುತ್ತೇನೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ವಲ್ಪ ಕಾಯಿರಿ :

ಮುಂದಿನ 5 ತಿಂಗಳಲ್ಲಿ ರಾಜ್ಯ ರಾಜ್ಯಕಾರಣದ ಚಿತ್ರಣ ಬದಲಾಗಲಿದೆ, ಸರ್ಕಾರ ಹೋಗುತ್ತಿರುವ ರೀತಿ ನೋಡಿದರೆ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆದಂತಿದೆ. ನಮ್ಮ ಕಾರ್ಯಕರ್ತರ ಮೇಲೆ ಕೇಸ್ ಹಾಕಲು ಈಗಲೇ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆತೆ ಧಕ್ಕೆ ಬರುವಂತಹ ಸಂಘಟನೆಗಳಿಗೆ ಬ್ಯಾನ್ ಮಾಡುವ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೊದಲು SDPI ಬ್ಯಾನ್ ಮಾಡಲಿ ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಉತ್ತರಿಸಿದರು.

25 ಕ್ಕೂ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ :

ವಿಧಾಸಭಾ ಫಲಿತಾಂಶದ ನಂತರ ಸುಮ್ಮನೆ ಕುಳಿತಿಲ್ಲ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ  25ಕ್ಕೂ  ಹೆಚ್ಚು ಸೀಟುಗಳನ್ನು ಕರ್ನಾಟಕದಲ್ಲಿ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕಿದೆ ಎಂದು ಬೊಮ್ಮಾಯಿ ಹೇಳಿದರು.

Join Whatsapp
Exit mobile version