ಜೆಡಿಎಸ್ , ಬಿಜೆಪಿ ಟೀಮ್ ಎಂದು ಬರೆದು ಕುತ್ತಿಗೆಗೆ ನೇತು ಹಾಕಿಕೊಂಡು ಸಿದ್ದರಾಮಯ್ಯ ಓಡಾಡಲಿ: ಎಚ್ ಡಿಕೆ

Prasthutha: December 2, 2021

ಬೆಂಗಳೂರು (ನೆಲಮಂಗಲ): ಮಾಜಿ ಪ್ರಧಾನಿ ದೇವೇಗೌಡರು ಅವಕಾಶವಾದಿ ರಾಜಕಾರಣಿ ಹಾಗೂ ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಹೇಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.


ಸಿದ್ದರಾಮಯ್ಯ ಹಾಗೆ ಹೇಳಿಕೊಳ್ಳುವ ಬದಲು ಒಂದು ಸ್ಲೇಟಿನಲ್ಲಿ ” ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ” ಅಂತ ಬರೆದುಕೊಂಡು ಕಟ್ಟು ಹಾಕಿಸಿ ಕುತ್ತಿಗೆಗೆ ಹಾಕಿಕೊಂಡು ತಿರುಗಾಡಲಿ. ಹಾಗೆಯೇ ಪ್ರಚಾರ ಮಾಡಿಕೊಂಡು ದಿನವೂ ಓಡಾಡಲಿ ಎಂದು ಟೀಕಿಸಿದರು.ನೆಲಮಂಗಲದಲ್ಲಿ ಇಂದು ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.


ಒಮಿಕ್ರಾನ್ ಬಗ್ಗೆ ಎಚ್ಚರಿಕೆ ಇರಲಿ:
ಹೊಸ ರೂಪದಲ್ಲಿ ಕಾಣಿಸಿಕೊಂಡಿರುವ ಕೋರೋನ ತಳಿ ಒಮಿಕ್ರಾನ್ ಬಗ್ಗೆ ಸರಕಾರ ನಿರ್ಲಕ್ಷ್ಯ ತೋರಬಾರದು ಹಾಗೂ ವೈದ್ಯಕೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.


ರಾಜ್ಯದಲ್ಲಿ ಹೊಸ ತಳಿಯ ವೈರಸ್ ಪತ್ತೆಯಾಗಿದೆ ಅಂದಾಕ್ಷಣ ಕೋವಿಡ್ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ ಎಂದಲ್ಲ. ಸರಕಾರ ಸಭೆಗಳನ್ನು ಮಾಡಿದೆ ಎಂಬುದನ್ನು ನಾನೂ ಗಮನಿಸಿದ್ದೇನೆ. ಏನೇ ಆದರೂ ಸರಕಾರ ಸಮರೋಪಾದಿಯಲ್ಲಿ ಕ್ರಮಗಳನ್ನು ವಹಿಸಬೇಕು ಎಂದು ಸಲಹೆ ಮಾಡಿದರು.
ಮೂರನೇ ಅಲೆ ಬಹಳ ಅಪಾಯಕಾರಿ ಎಂದು ತಜ್ಞರು ಹೇಳುತ್ತಿದ್ದು, ಆರೋಗ್ಯ ಇಲಾಖೆ ಮುಕ್ತವಾಗಿ ಕೆಲಸ ಮಾಡಲು ಹಾಗೂ ವೈದ್ಯರು ಸಮರ್ಪಕವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ ಮೂರ್ತಿ, ಮಾಜಿ ಶಾಸಕ ಈ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಹಾಗೂ ಮೇಲ್ಮನೆ ಚುನಾವಣೆಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ರಮೇಶ್ ಗೌಡ ಹಾಜರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!