ಕೊಲ್ಕತಾ : ಕೇಂದ್ರ ಸರ್ಕಾರವು ಇಂಧನ ಬೆಲೆ ಹೆಚ್ಚಳದಿಂದ ಇತ್ತೀಚಿನ ದಿನಗಳಲ್ಲಿ 4 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ. ಈ ಹಣವನ್ನು ರಾಜ್ಯಗಳಿಗೆ ಸಮಾನವಾಗಿ ವಿತರಿಸಬೇಕು ಎಂದು ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ ಎಂದು ಅಸೆಂಬ್ಲಿ ಅಧಿವೇಶನದಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ, ತೆರಿಗೆಯಿಂದ ಕೇಂದ್ರ ಸರ್ಕಾರ ಸುಮಾರು 4 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಈಗ ಬಿಜೆಪಿಯು ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಬೇಕೆಂದು ಬಯಸುತ್ತಿದೆ. ರಾಜ್ಯಗಳು ಹಣವನ್ನು ಎಲ್ಲಿಂದ ತರುತ್ತವೆ? ಕೇಂದ್ರ ಸರ್ಕಾರ ಸಂಗ್ರಹಿಸಿರುವ 4 ಲಕ್ಷ ಕೋಟಿ ರೂಪಾಯಿಯನ್ನು ರಾಜ್ಯಗಳಿಗೆ ಸಮಾನವಾಗಿ ವಿತರಿಸಬೇಕು. ಆರ್ಥಿಕ ಅಡಚಣೆಗಳ ನಡುವೆಯೂ ರಾಜ್ಯವು ಹಲವಾರು ಸಬ್ಸಿಡಿಗಳನ್ನು ನೀಡುತ್ತಿದೆ” ಎಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಹೇಳಿದ್ದಾರೆ.