ಪೌರ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಳ್ಳಲಿ: ರಿಯಾಝ್ ಫರಂಗಿಪೇಟೆ

Prasthutha|

ಉಳ್ಳಾಲ: ವೇತನ ಹೆಚ್ಚಳವನ್ನೊಳಗೊಂಡಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಕಳೆದ ಹಲವಾರು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ದುಡಿಯುವ ಪೌರ ಕಾರ್ಮಿಕರ ವೇತನವನ್ನು ಹೆಚ್ಚಳ ಮಾಡಿರುವುದಿಲ್ಲ. ಮಾತ್ರವಲ್ಲ ಅವರ ಹುದ್ದೆಗಳನ್ನು ಖಾಯಂಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದನ್ನು ವಿರೋಧಿಸಿ ಪೌರ ಕಾರ್ಮಿಕರು
ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಾಜ್ಯದಾದ್ಯಂತ ಕಸ ವಿಲೇವಾರಿ ಆಗದೇ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಗಾರಿದರು.

ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗುತ್ತಿಗೆ ಪೌರ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಿ, ಕಸದ ವಿಲೇವಾರಿಯನ್ನು ಮಾಡಿ ಜನತೆಯ ಸಂಕಷ್ಟವನ್ನು ನಿವಾರಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ರಿಯಾಝ್ ಫರಂಗಿಪೇಟೆ ಆಗ್ರಹಿಸಿದ್ದಾರೆ.

Join Whatsapp