Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರ ಜನಸ್ಪಂದನ ಬದಲು ಜಲಸ್ಪಂದನ ಮಾಡಲಿ: ಡಿ.ಕೆ. ಶಿವಕುಮಾರ್

ರಾಜ್ಯ ಸರ್ಕಾರ ಜನಸ್ಪಂದನ ಬದಲು ಜಲಸ್ಪಂದನ ಮಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ರಾಜ್ಯ ಸರ್ಕಾರ ಬೆಂಗಳೂರಿನ ಐಟಿ ಕಾರಿಡಾರ್ ನಲ್ಲಿ ಜಲಸಂಚಾರ ಕ್ಕಾಗಿ ಬೋಟ್ ಫ್ಯಾಕ್ಟರಿ ಆರಂಭಿಸುವುದು ಉತ್ತಮ. ಬಿಜೆಪಿ ಅವರು ಜನಸ್ಪಂದನ ಬದಲಾಗಿ ಮೊದಲು ಜಲಸ್ಪಂದನ ಕೆಲಸ ಮಾಡಲಿ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ನಿರಂತರ ಮಳೆ ಬೀಳುತ್ತಿದೆ. ಈ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬೆಲೆ ತಿಳಿದಿಲ್ಲ. ಬೆಂಗಳೂರು ಎಷ್ಟು ಜನರಿಗೆ ಉದ್ಯೋಗ ನೀಡಿದೆ ಎಂಬುದು ಗೊತ್ತಿಲ್ಲ. ದೇಶಕ್ಕೆ ಸುಮಾರು 30 % ರಷ್ಟು ತೆರಿಗೆ ಆದಾಯ ಕೇಂದ್ರಕ್ಕೆ ಇಲ್ಲಿಂದಲೇ ಹೋಗುತ್ತದೆ.

ನಾನು ಬೆಂಗಳೂರು ನಿವಾಸಿಯಾಗಿದ್ದು, ನಮಗೆ ಒಂದು ಅವಕಾಶ ನೀಡಿ. ನಾವು ನಿಮ್ಮ ಗೌರವ ಕಾಪಾಡಿ ಉತ್ತಮ ಬದುಕು ನೀಡುವಂತಹ ಆಡಳಿತ ನೀಡುತ್ತೇವೆ’ ಎಂದು ಜನರಿಗೆ ಮನವಿ ಮಾಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗುತ್ತಿರುವ ಬಗ್ಗೆ ಕೇಳಿದಾಗ, ‘ನಮಗೆ ಅವಕಾಶ ಕೊಟ್ಟರೆ ನಾವು ಬೆಂಗಳೂರಿನ ಬ್ರ್ಯಾಂಡ್ ಅನ್ನು ಮರುಸ್ಥಾಪಿಸುತ್ತೇವೆ’ ಎಂದು ಉತ್ತರಿಸಿದರು.

Join Whatsapp
Exit mobile version