Home ಟಾಪ್ ಸುದ್ದಿಗಳು ಅಫ್ಘಾನಿಸ್ತಾನದಲ್ಲಿ ಭಾರತ ಆರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ: ತಾಲಿಬಾನ್

ಅಫ್ಘಾನಿಸ್ತಾನದಲ್ಲಿ ಭಾರತ ಆರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ: ತಾಲಿಬಾನ್

ನವದೆಹಲಿ: ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಬೇರೆ ರಾಷ್ಟ್ರಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿರುವ ತಾಲಿಬಾನ್, ಭಾರತ ಬಯಸುವುದಾದರೆ ಮೂಲಭೂತ ಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸಲಿ ಎಂದು ತಾಲಿಬಾನ್ ವಕ್ತಾರ ಸುಹೈಲ್ ಶಹೀನ್ ಹೇಳಿದ್ದಾರೆ.


ಯಾರ ವಿರುದ್ಧವೂ ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಯಾವುದೇ ದೇಶಕ್ಕೆ ನಾವು ಬಿಡುವುದಿಲ್ಲ. ಇದು ಸ್ಪಷ್ಟ, ಅಫ್ಘಾನಿಸ್ತಾನದಲ್ಲಿ ಭಾರತ ಹಲವು ಯೋಜನೆಗಳನ್ನು, ನಿರ್ಮಾಣಗಳನ್ನು ಮತ್ತು ಮೂಲಭೂತ ಸೌಕರ್ಯ ಯೋಜನೆಗಳನ್ನು ಮಾಡಿದೆ. ಭಾರತ ಬಯಸುವುದಾದರೆ ಅಪೂರ್ಣಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ, ಏಕೆಂದರೆ ಯೋಜನೆಗಳು ಜನರ ಪರವಾಗಿದೆ ಎಂದು ವಕ್ತಾರ ಶಹೀನ್ ಪಾಕಿಸ್ತಾನದ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉರ್ದುವಿನಲ್ಲಿ ಹೇಳಿದ್ದಾರೆ.


ಕಳೆದ ಸೋಮವಾರ ಅಫ್ಘಾನಿಸ್ತಾನವನ್ನು ತಾಲಿಬಾನೀಯರು ವಶಪಡಿಸಿಕೊಂಡ ನಂತರ ಭಾರತ ಬಗ್ಗೆ ನೀಡುತ್ತಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ.

Join Whatsapp
Exit mobile version