ಉಪ್ಪಿನಂಗಡಿ ಲಾಠಿ ಚಾರ್ಜ್ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಲಿ: ಅಬೂಬಕ್ಕರ್ ಕುಳಾಯಿ

Prasthutha|

ಪುತ್ತೂರು: ಅಕ್ರಮವಾಗಿ ಬಂಧಿಸಿದ ಪಿಎಫ್ಐ ನಾಯಕರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಮೇಲೆ ಉಪ್ಪಿನಂಗಡಿ ಪೊಲೀಸರು ಏಕಾಏಕಿ ಲಾಠಿ ಚಾರ್ಜ್ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಕೃತ್ಯವನ್ನು ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ತೀವ್ರವಾಗಿ ಖಂಡಿಸಿದ್ದಾರೆ.

- Advertisement -


ಇತ್ತೀಚೆಗೆ ಇಲಂತಿಲದಲ್ಲಿ ಐದು ಮಂದಿ ಮುಸ್ಲಿಮ್ ಯುವಕರ ಮೇಲೆ ಸಂಘಪರಿವಾರದ ಮೂವತ್ತರಷ್ಟು ಗೂಂಡಾಗಳು ತ್ರಿಶೂಲದಿಂದ ಮಾರಣಾಂತಿಕ ಹಲ್ಲೆ ನಡೆಸಿದ ಮರುದಿನ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ ಎಂಬ ನೆಪದಲ್ಲಿ ಮೂವರು ಮುಸ್ಲಿಂ ನಾಯಕರನ್ನು ಅಕ್ರಮವಾಗಿ ಬಂಧಿಸುವುದನ್ನು ಖಂಡಿಸಿ, ಅವರನ್ನು ಬಿಡುಗಡೆಗೆ ಆಗ್ರಹಿಸಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಗೆ ಪೋಲೀಸರು ಏಕಾಏಕಿ ಲಾಠಿ ಪ್ರಹಾರ ನಡೆಸಿದ್ದಾರೆ.


ನಿನ್ನೆ ಬೆಳಿಗ್ಗೆಯಿಂದ ಸಂಜೆ ತನಕ ಪ್ರತಿಭಟನಕಾರರು ಶಾಂತಿಯಿಂದಲೇ ವರ್ತಿಸುತ್ತಿದ್ದರು. ಮಾತ್ರವಲ್ಲದೆ ಸಂಘಟನೆಯ ನಾಯಕರು ಪೊಲೀಸರ ಸಮ್ಮುಖದಲ್ಲಿ ಎಲ್ಲರನ್ನೂ ಶಾಂತಿಯಿಂದಲೇ ಇರುವಂತೆ ಪ್ರೇರೇಪಣೆ ಮಾಡುತ್ತಿದ್ದರು. ಆದರೂ ಕೆಲವು ಅಧಿಕಾರಿಗಳು ಕಾರ್ಯಕರ್ತರನ್ನು ಪ್ರಚೋದಿಸಲು ಯತ್ನಿಸಿದರು ಸಹ ಶಾಂತಿ ಕಾಪಾಡಿಕೊಂಡು ಬಂದಿರುತ್ತಾರೆ. ಆದರೆ ಪೊಲೀಸ್ ಅಧಿಕಾರಿಗಳು ಏಕಾಏಕಿ ಪ್ರತಿಭಟನಾ ನಿರತರ ಮೇಲೆ ಲಾಠಿ ದಾಳಿ ನಡೆಸಿ ಕ್ರೌರ್ಯವನ್ನು ಮೆರೆದು ಪ್ರಕ್ಷುಬ್ಧ ವಾತಾವರಣವನ್ನು ನಿರ್ಮಿಸಿದ್ದಾರೆ ಇದು ಪೊಲೀಸ್ ಇಲಾಖೆಯ ದ್ವಿಮುಖ ನೀತಿಯಾಗಿರುತ್ತದೆ ಎಂದು ಅವರು ಟೀಕಿಸಿದರು.

- Advertisement -


ಉನ್ನತ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸರ ಮೇಲೆ ಕಾನೂನು ಕ್ರಮ ಜರಗಿಸಬೇಕೆಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.



Join Whatsapp